ದಾವಣಗೆರೆ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ತಾಯಿ ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ
ಮೃತರನ್ನು ಗಂಗನರಸಿ ಗ್ರಾಮದ ಸುವರ್ಣಮ್ಮ (56) ಹಾಗೂ ಅಂಗವಿಕಲ ಮಗಳು ಗೌರಮ್ಮ (26) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬ 3 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು. ಮೈಕ್ರೋ ಫೈನಾನ್ಸ್ ಸೇರಿದಂತೆ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟ ತಾಳಲಾರದೇ ತುಂಗಾಭದ್ರಾ ನದಿಗೆ ನಿರ್ಮಿಸಿದ ರೈಲ್ವೇ ಸೇತುವೆ ಮೇಲೆ ತೆರಳಿ ಸೂಸೈಡ್ ಮಾಡಿಕೊಂಡಿದ್ದಾರೆ. ದಾವಣಗೆರೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

