SHOCKING : ಶಿವಮೊಗ್ಗದಲ್ಲಿ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಪಾಪಿ ತಾಯಿ ಅರೆಸ್ಟ್ .!

ಶಿವಮೊಗ್ಗ: ನವಜಾತ ಶಿಶುವಿನ ಕತ್ತು ಕೊಯ್ದು ಕೊಲೆ ಮಾಡಿದ ಮಹಿಳೆಯನ್ನು ಪೊಲೀಸರು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೌದು, ತಾನೇ ಜನ್ಮ ನೀಡಿದ ಮಗುವನ್ನ ಮಹಿಳೆ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ನಡೆದಿದೆ.

ಶೈಲಾ ಎಂಬ ಮಹಿಳೆ ತನ್ನ ಮಗುವನ್ನೇ ಕೊಲೆಗೈದ ಆರೋಪಿ. 1 ದಿನದ ಗಂಡು ಮಗುವನ್ನ ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾದ ಹಿನ್ನೆಲೆ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ
ಆಗಸ್ಟ್ 16ರಂದು ಶೈಲಾ ನಾದಿನಿ ಶಿವಮೊಗ್ಗಾ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದರು. ಆಕೆಯನ್ನು ನೋಡಲೆಂದು ಬಂದ ಶೈಲಾಳಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೊಟ್ಟೆ ನೋವು ಎಂದು ಶೈಲಾ ಆಸ್ಪತ್ರೆಗೆ ದಾಖಲಾಗಿದ್ದಳು. ಕೆಲ ಸಮಯದ ಬಳಿಕ ಶೌಚಾಲಯಕ್ಕೆ ಹೋಗಿದ್ದ ಶೈಲಾ ಗೆ ನಾರ್ಮಲ್ ಡೆಲಿವರಿ ಆಗಿದೆ. ಶೌಚಾಲಯದಲ್ಲಿ ಶಸ್ತ್ರಚಿಕಿತ್ಸೆಗೆ ಬಳಸುವ ಬ್ಲೇಡ್ ನಿಂದ ಶಿಶುವಿನ ಕತ್ತು ಕೊಯ್ದು ಹತ್ಯೆಗೈದಿದ್ದಾಳೆ. ಬಳಿಕ ಏನೂ ಆಗದವರಂತೆ ಬಂದು ವಾರ್ಡ್ ನಲ್ಲಿ ಚಿಕಿತ್ಸೆ ಪಡೆದಿದ್ದಾಳೆ. ಶೌಚಾಲಯದಲ್ಲಿ ಶಿಶುವಿನ ಮೃತದೇಹ ಪತ್ತೆಯಾಗುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿಗಳು ಪೊಲೀಸರಿಗೆ ದೂರು ನೀಡಿದ್ದರು.

ಆಸ್ಪತ್ರೆಗೆ ಬಂದ ಪೊಲೀಸರಿಗೆ ಶೈಲಾ ಹಾಗೂ ಆಕೆಯ ಪತಿ ಮೇಲೆ ಅನುಮಾನವಿತ್ತು. ಪ್ರಶ್ನಿಸಿದಾಗ ಮಗು ನಮ್ಮದಲ್ಲ ಎಂದಿದ್ದಾರೆ. ಚಿಕಿತ್ಸೆ ಬಳಿಕ ಶೈಲಾ ಊರಿಗೆ ತೆರಳಿದ್ದಾಳೆ. ತನಿಖೆ ಚುರುಕುಗೊಳಿಸಿದ ಪೊಲೀಸರು ಶೈಲಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಿಷಯ ಬಾಯ್ಬಿಟ್ಟಿದ್ದಾಳೆ. ಶೈಲಾಳನ್ನು ದೊಡ್ದಪೇಟೆ ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read