HomeLatest NewsSHOCKING: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ತಾಯಿ ಆತ್ಮಹತ್ಯೆ

SHOCKING: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ತಾಯಿ ಆತ್ಮಹತ್ಯೆ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಬರದನಹಳ್ಳಿಯಲ್ಲಿ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿದ್ದಮ್ಮ(30), ಆರ್ಯ(4), ಅವನಿ(6), ಅಭಿಜ್ಞಾ(8) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮೂವರು ಮಕ್ಕಳನ್ನು ಕೃಷಿಹೊಂಡಕ್ಕೆ ತಳ್ಳಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಮೂಲದ ಸಿದ್ದಮ್ಮ ಪತಿಯ ಜೊತೆಗೆ ಕುರಿ ಮೇಯಿಸಲು ಬಂದಿದ್ದರು. ಬರದನಹಳ್ಳಿಯ ರಾಘವೇಂದ್ರ ಎಂಬುವವರ ಜಮೀನಿನಲ್ಲಿ ಕುರಿ ಮಂದೆ ಹಾಕಿದ್ದರು. ಪತಿ ಕುಮಾರ್ ಜೊತೆಗೆ ನಿನ್ನೆ ಪತ್ನಿ ಸಿದ್ದಮ್ಮ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಗಲಾಟೆಯ ನಂತರ ಮೂವರು ಮಕ್ಕಳ ಜೊತೆಗೆ ಸಿದ್ದಮ್ಮ ಕುರಿ ಮೇಯಿಸಲು ತೆರಳಿದ್ದಾರೆ. ಕುರಿ ಮೇಯಿಸಲು ಹೋದಾಗಲೇ ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿದ್ದಾರೆ. ಸಂಜೆಯಾದರೂ ಕುರಿಗಳು, ಪತ್ನಿ, ಮಕ್ಕಳು ಹಿಂತಿರುಗದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಲಾಗಿದೆ. ಕೃಷಿ ಹೊಂಡದ ಬಳಿಯೇ ಕುರಿಗಳು ನಿಂತಿದ್ದರಿಂದ ಅನುಮಾನಗೊಂಡು ಕೃಷಿಹೊಂಡದಲ್ಲಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಗಾಬರಿಯಾದ ಪತಿ ಕುಮಾರ್ ತಮ್ಮ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular