ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ತಾಯಿ ಮತ್ತು ಮಗಳು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಎಂ. ಮಹೇಶ್ ಅವರ ಪತ್ನಿ ಶಕುಂತಲಾ(37), ಅವರ ಪುತ್ರಿ ಪ್ರಿಯಾ(18) ಮೃತಪಟ್ಟವರು. ಪಕ್ಕದ ಮನೆಯ 35 ವರ್ಷದ ವಿವಾಹಿತ ಪುತ್ರಿಯನ್ನು ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿದ್ದ. ಆತನಿಗೆ ಮಹೇಶ್ ಬುದ್ಧಿವಾದ ಹೇಳಿ ಕಳುಹಿಸಿದ್ದರು.
ಪುತ್ರಿಗೆ ಬೇರೊಬ್ಬನ ಜೊತೆ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವುದನ್ನು ತಿಳಿದ ಆತ ಬೇರೆಯವರೊಂದಿಗೆ ಮದುವೆ ಮಾಡಿದರೆ ನಿಮ್ಮನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಮನನೊಂದು ನನ್ನ ಪತ್ನಿ ಹಾಗೂ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಹೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

