ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ತಾಯಿ, ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ನೀರಿನ ತೊಟ್ಟಿಯಲ್ಲಿ 42 ವರ್ಷದ ಗೀತಾ, ಪುತ್ರಿ ಪ್ರಿಯಾಂಕಾ(20) ಶವ ಪತ್ತೆಯಾಗಿದೆ.
ಚಿತ್ರದುರ್ಗದ ತಿಪ್ಪೇರುದ್ರಸ್ವಾಮಿ ಆಶ್ರಮದ ಆವರಣದಲ್ಲಿ ಘಟನೆ ನಡೆದಿದೆ. ಆಶ್ರಮದ ಪೂಜಾರಿ ಸುರೇಶ್ ಅವರ ಪತ್ನಿ ಗೀತಾ ಮತ್ತು ಪುತ್ರಿ ಪ್ರಿಯಾಂಕಾ ಮೃತಪಟ್ಟವರು. ಸಣ್ಣ ನೀರಿನ ಟ್ಯಾಂಕ್ ನಲ್ಲಿ ಬಿದ್ದು ತಾಯಿ, ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 
			 
		 
		 
		 
		 Loading ...
 Loading ... 
		 
		 
		