HomeKarnatakaBREAKING: ಚಿತ್ರದುರ್ಗದಲ್ಲಿ ತಾಯಿ, ಮಗಳು ನಿಗೂಢ ಸಾವು: ನೀರಿನ ತೊಟ್ಟಿಯಲ್ಲಿ ಶವ ಪತ್ತೆ

BREAKING: ಚಿತ್ರದುರ್ಗದಲ್ಲಿ ತಾಯಿ, ಮಗಳು ನಿಗೂಢ ಸಾವು: ನೀರಿನ ತೊಟ್ಟಿಯಲ್ಲಿ ಶವ ಪತ್ತೆ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ತಾಯಿ, ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ನೀರಿನ ತೊಟ್ಟಿಯಲ್ಲಿ 42 ವರ್ಷದ ಗೀತಾ, ಪುತ್ರಿ ಪ್ರಿಯಾಂಕಾ(20) ಶವ ಪತ್ತೆಯಾಗಿದೆ.

ಚಿತ್ರದುರ್ಗದ ತಿಪ್ಪೇರುದ್ರಸ್ವಾಮಿ ಆಶ್ರಮದ ಆವರಣದಲ್ಲಿ ಘಟನೆ ನಡೆದಿದೆ. ಆಶ್ರಮದ ಪೂಜಾರಿ ಸುರೇಶ್ ಅವರ ಪತ್ನಿ ಗೀತಾ ಮತ್ತು ಪುತ್ರಿ ಪ್ರಿಯಾಂಕಾ ಮೃತಪಟ್ಟವರು. ಸಣ್ಣ ನೀರಿನ ಟ್ಯಾಂಕ್ ನಲ್ಲಿ ಬಿದ್ದು ತಾಯಿ, ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular