HomeKarnatakaBREAKING NEWS: ಬಟ್ಟೆ ತೊಳೆಯಲು ಹೋದಾಗ ದುರಂತ: ಕಾಲುವೆ ನೀರಿನಲ್ಲಿ ಕೊಚ್ಚಿ ಹೋದ ತಾಯಿ-ಮಗಳು

BREAKING NEWS: ಬಟ್ಟೆ ತೊಳೆಯಲು ಹೋದಾಗ ದುರಂತ: ಕಾಲುವೆ ನೀರಿನಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ರಾಯಚೂರು: ಬಟ್ಟೆ ತೊಳೆಯಲು ಹೋದಾಗ ದುರಂತವೊಂದು ಸಂಭವಿಸಿದ್ದು, ತಾಯಿ ಹಾಗೂ ಮಗಳು ನದಿ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ತಾಯಿ ಹಾಗೂ ಮಗಳು ಇಬ್ಬರೂ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ರಾಯಚೂರು ತಾಲೂಕಿನ ಬಿ.ಯದ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ತಾಯಿ ಸುಜಾತಾ (27 ಹಾಗೂ ಮಗಳು ಶ್ರಾವಣಿ (10) ಮೃತರು. ತಾಯಿ ಶವ ಪತ್ತೆಯಾಗಿದ್ದು, ಮಗಳ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular