HomeKarnatakaSHOCKING NEWS: ತಾಯಿಯ ಶವದ ಜೊತೆ 3-4 ದಿನ ಕಳೆದಿದ್ದ ಬುದ್ಧಿಮಾಂದ್ಯ ಮಗಳೂ ಸಾವು

SHOCKING NEWS: ತಾಯಿಯ ಶವದ ಜೊತೆ 3-4 ದಿನ ಕಳೆದಿದ್ದ ಬುದ್ಧಿಮಾಂದ್ಯ ಮಗಳೂ ಸಾವು

ಉಡುಪಿ: ತಾಯಿಯ ಶವದ ಜೊತೆ 3-4 ದಿನ ಅನ್ನ, ನೀರಿಲ್ಲದೇ ಕಳೆದಿದ್ದ ಬುದ್ಧಿಮಾಂದ್ಯ ಮಗಳು ಕೂಡ ಸಾವನ್ನಪ್ಪಿರುವ ಮನಕಲಕುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನವಾಡಿಯಲ್ಲಿ ಈ ಘಟನೆ ನಡೆದಿದೆ. ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (30) ಮೃತ ದುರ್ದೈವಿಗಳು.

ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿರುವ ತಾಯಿ ಜಯಂತಿ ಶೆಟ್ಟಿ 3-4 ದಿನಗಳ ಹಿಂದೆ ಮನೆಯಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಗಳು ಪ್ರಗತಿ ಶೆಟ್ಟಿಯನ್ನು ರಕ್ಷಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ಕೋಟೇಶ್ವರ ಆಸ್ಪತ್ರೆಗೆ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಚಿಕಿತ್ಸೆ ಫಲಿಸದೇ ಮಗಳು ಸಾವನ್ನಪ್ಪಿದ್ದಾರೆ. ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular