ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ, ಮಗಳು ಒಟ್ಟಿಗೆ ಪಾಸ್: ಮಗಳಿಗಿಂತ ತಾಯಿಗೆ ಹೆಚ್ಚು ಅಂಕ

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸುಳ್ಯದಲ್ಲಿ ತಾಯಿ, ಮಗಳು ಒಟ್ಟಿಗೆ ಪರೀಕ್ಷೆ ಬರೆದು ಪಾಸಾಗಿದ್ದಾರೆ.

ಸುಳ್ಯದ ಜಯನಗರದ ರಮೇಶ್ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಶಾ ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಪಾಸಾಗಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ನಡುವೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಕಲಾ ವಿಭಾಗದಲ್ಲಿ 249 ಅಂಕ ಪಡೆದು 45ನೇ ವರ್ಷದಲ್ಲಿ ಉತ್ತೀರ್ಣರಾಗಿದ್ದಾರೆ.

ಅವರ ಮಗಳು ತ್ರಿಶಾ ಸುಳ್ಯ ಜೂನಿಯರ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಓದಿ ಪರೀಕ್ಷೆ ಬರೆದು 241 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. 25 ವರ್ಷಗಳ ಹಿಂದೆ ಗೀತಾ ಅವರ ಪ್ರೌಢಶಾಲೆ ಶಿಕ್ಷಣ ಮೊಟಕುಗೊಂಡಿತ್ತು. 2 ವರ್ಷಗಳ ಹಿಂದೆ ಎಸ್‌ಎಸ್‌ಎಲ್‌ಸಿ ಬರೆದು ಪಾಸಾಗಿದ್ದರು. ಈ ವರ್ಷ ಸುಳ್ಯದ ಗಾಂಧಿನಗರ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಕಟ್ಟಿದ್ದರು. ಗೃಹರಕ್ಷಕ ದಳದ ಕೆಲಸ ಮನೆ ಕೆಲಸದ ನಡುವೆ ಬಿಡುವಿನ ವೇಳೆಯಲ್ಲಿ ಅವರು ಅಭ್ಯಾಸ ನಡೆಸಿದ್ದಾರೆ. ಕಾಲೇಜಿನ ಉಪನ್ಯಾಸಕರು ಕೂಡ ಪುಸ್ತಕಗಳನ್ನು ನೀಡಿ ಅವರಿಗೆ ಸಹಕಾರ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read