HomeKarnatakaಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.

ಮಾಳಮ್ಮ (45) ಹಾಗೂ ಅಮೃತ (12) ಮೃತರು. ತಾಯಿ ಹಾಗೂ ಮಗಳ ಶವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಾಯಿ ಮಾಳಮ್ಮ ಕೂಲಿ ಕೆಲಸ ಮಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೊಯದಿಂದ ಮನನೊಂದು ಮಗಳ ಸಮೇತ ನೇಣಿಗೆ ಕೊರಳೊಡ್ಡಿದ್ದಾರೆ. ಸ್ಥಳಕ್ಕೆ ಲಿಂಗಸಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular