HomeKarnatakaಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಕುಣಿಗಲ್ ತಾಲೂಕು ಹಂಗರಹಳ್ಳಿ ನಿವಾಸಿ ವಿರೂಪಾಕ್ಷ ಎಂಬಾತ ಶಿಕ್ಷಗೆ ಒಳಗಾದ ವ್ಯಕ್ತಿ. ತಾಯಿ ಜಯಮ್ಮ ಬುದ್ಧಿವಾದ ಹೇಳಿದ್ದಕ್ಕೆ 2021ರ ಜನವರಿ 15ರಂದು ರಾತ್ರಿ ಕೊಲೆ ಮಾಡಿದ್ದ. ಕೆಲಸ ಮಾಡದೆ ಮನೆಯಲ್ಲಿ ಇರುತ್ತಿದ್ದ ವಿರೂಪಾಕ್ಷ ಹಣಕ್ಕಾಗಿ ಪದೇಪದೇ ತಾಯಿಯನ್ನು ಪೀಡಿಸುತ್ತಿದ್ದ. ಹಣ ಕೊಡದಿದ್ದಾಗ ಗಲಾಟೆ ಮಾಡುತ್ತಿದ್ದ. ಹಣ ನೀಡಲು ನಿರಾಕರಿಸಿದ ಜಯಮ್ಮ ಬುದ್ಧಿವಾದ ಹೇಳಿದ್ದರು.

ಅಂದು ರಾತ್ರಿ ಜಯಮ್ಮ ಮಲಗಿದ್ದ ವೇಳೆ ತಲೆ ಮೇಲೆ ಕಾರ ಅರೆಯುವ ಗುಂಡುಕಲ್ಲು ಎತ್ತಿ ಹಾಕಿ ವಿರೂಪಾಕ್ಷ ಕೊಲೆ ಮಾಡಿದ್ದ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಅಂದಿನ ಸಿಪಿಐ ಗುರುಪ್ರಸಾದ್ ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular