SHOCKING NEWS: ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟು ಹಾಕಿದ ದುರುಳ ಮಕ್ಕಳು

ಅಗರ್ತಲಾ: ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿಹಾಕಿದ ಇಬ್ಬರು ಮಕ್ಕಳು ಆಕೆಯನ್ನು ಸಜೀವವಾಗಿ ದಹಿಸಿರುವ ಹೃದಯವಿದ್ರಾವಕ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ.

ಕೌಟುಂಬಿಕ ಕಲಹಕ್ಕೆ ಕ್ರೂರ ಮಕ್ಕಳು ಹೆತ್ತ ತಾಯಿಯನ್ನೇ ಬೆಂಕಿ ಹಚ್ಚಿ ಸಾಯಿಸಿದ್ದಾರೆ. ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿ ಸುಡಲಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಷ್ಟರಲ್ಲೇ ಮಹಿಳೆಸಂಪೂರ್ಣ ಸಜೀವದಹನವಾಗಿದ್ದಾರೆ.

ಪ್ರಕರಣ ಸಂಬಂಧ ಇಬ್ಬರು ಆರೋಪಿ ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಬಗ್ಗೆ ಜಿರಾನಿಯಾದ ಉಪವಿಭಾಗದ ಪೊಲೀಸ್ ಅಧಿಕಾರಿ ಕಮಲ್ ಕೃಷ್ಣ ಕೊಲೊಯ್ ಮಾಹಿತಿ ನೀಡಿದ್ದು, ಇಬ್ಬರು ಪುತ್ರರನ್ನು ಬಂಧಿಸಲಾಗಿದ್ದು, ಇಂದು ಕೋರ್ಟ್ ಗೆ ಹಾಜರುಪಡಿಸಲಾಗುವುದು. ಮಹಿಳೆ ಒಂದುವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಬಳಿಕ ತನ್ನ ಇಬ್ಬರು ಗಂಡು ಮಕ್ಕಳ ಜೊತೆ ವಾಸವಾಗಿದ್ದರು. ಆಕೆಯ ಇನ್ನೋರ್ವ ಮಗ ಅಗರ್ತಲಾದಲ್ಲಿ ವಾಸವಾಗಿದ್ದ. ಕೌಟುಂಬಿಕ ಕಲಹಕ್ಕೆ ತಾಯಿಯನ್ನೇ ಹತ್ಯೆ ಮಾಡಿರುವ ಶಂಕೆ ಇದೆ. ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read