HomeLatest NewsBREAKING: ವಾಟ್ಸಾಪ್ ಸ್ಟೇಟಸ್ ವಿಚಾರಕ್ಕೆ ತಾಯಿ, ಮಗನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BREAKING: ವಾಟ್ಸಾಪ್ ಸ್ಟೇಟಸ್ ವಿಚಾರಕ್ಕೆ ತಾಯಿ, ಮಗನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಪುಟ್ಬಾಕ್ ಗ್ರಾಮದಲ್ಲಿ ವಾಟ್ಸಾಪ್ ಸ್ಟೇಟಸ್ ವಿಚಾರಕ್ಕೆ ತಾಯಿ, ಮಗನ ಮೇಲೆ ಹಲ್ಲೆ ನಡೆಸಲಾಗಿದೆ.

ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ ರೀತಿಯಲ್ಲಿ ಸ್ಟೇಟಸ್ ಹಾಕಿದ ಆರೋಪ ಕೇಳಿ ಬಂದಿದ್ದು, ಇದೇ ಕಾರಣಕ್ಕೆ ಮನೆಗೆ ಹೋಗಿ ಸ್ಟೇಟಸ್ ಹಾಕಿದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಮಗನನ್ನು ಹೊಡೆದಿದ್ದನ್ನು ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆಯೂ ಹಲ್ಲೆ ನಡೆಸಲಾಗಿದೆ. ಶಿವ ಮಾಲಾಧಾರಿಗಳ ಕಾರ್ಯಕ್ರಮಕ್ಕೆ ಕೇಸರಿ ಧ್ವಜ ಹಾಕಲಾಗಿದ್ದು, ಇದೇ ದೃಶ್ಯಗಳನ್ನು ಎಡಿಟ್ ಮಾಡಿ ಯುವಕ ಸ್ಟೇಟಸ್ ಹಾಕಿದ್ದ. ಈ ಹಿನ್ನೆಲೆ ಅನ್ಯಕೋಮಿನವರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ.

ಹಲ್ಲೆ ಖಂಡಿಸಿ ಗ್ರಾಮಸ್ಥರು ಮತ್ತು ಶಿವ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಕೈಯಲ್ಲಿ ಶಿವ ಪಾರ್ವತಿ ಮತ್ತು ಅಂಬೇಡ್ಕರ್ ಭಾವಚಿತ್ರ ಹಿಡಿದು ಧರಣಿ ನಡೆಸಿದ್ದಾರೆ. ಮುನ್ನೆಚ್ಚರಿಕೆಯಿಂದ ಸ್ಥಳದಲ್ಲಿ ಗುರುಮಠಕಲ್ ಠಾಣೆ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular