ತುಮಕೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
ವಿಜಯಲಕ್ಷ್ಮೀ (45) ತನ್ನ ಇಬ್ಬರು ಮಕ್ಕಳಾದ 18 ವರ್ಷದ ಮಗಳು ಹಾಗೂ 16 ವರ್ಷದ ಮಗನೊಂದಿಗೆ ಸಾವಿಗೆ ಶರಣಾಗಿದ್ದಾಳೆ. ಮಕ್ಕಳಿಬ್ಬರೂ ಅಂಗವೈಕಲ್ಯದಿಂದ ಬಳಲುತ್ತಿದ್ದರು. ಅವರ ಸ್ಥಿತಿ ಕಂಡು ಮಾನಸಿಕವಾಗಿ ನೊಂದಿದ್ದ ತಾಯಿ, ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.