HomeLatest NewsBREAKING: ಬೆಂಕಿ ಹಚ್ಚಿಕೊಂಡು ತಾಯಿ-ಮಗಳು ಆತ್ಮಹತ್ಯೆಗೆ ಯತ್ನ: ತಾಯಿ ಸಾವು, ಮಗಳ ಸ್ಥಿತಿ ಗಂಭೀರ

BREAKING: ಬೆಂಕಿ ಹಚ್ಚಿಕೊಂಡು ತಾಯಿ-ಮಗಳು ಆತ್ಮಹತ್ಯೆಗೆ ಯತ್ನ: ತಾಯಿ ಸಾವು, ಮಗಳ ಸ್ಥಿತಿ ಗಂಭೀರ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿ ತನ್ನ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೃಷ್ಣಪ್ಪ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ತಾಯಿ ಸೀತಾ (29) ನಾಲ್ಕು ವರ್ಷದ ಮಗಳು ಸೃಷ್ಟಿಯೊಂದಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ತಾಯಿ ಸೀತಾ ಸಾವನ್ನಪ್ಪಿದ್ದಾರೆ. ಮಗಳು ಸೃಷ್ಟಿ ಗಂಭಿರವಾಗಿ ಗಾಯಗೊಂಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳು ಮಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಸೃಷ್ಟಿ ಸ್ಥಿತಿಯೂ ಗಂಭಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular