BIG NEWS: ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ; ಆರೋಪಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ

ಆನೇಕಲ್: ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ.

ನಾರಾಯಣಪ್ಪ (52) ಕೊಲೆಯಾದ ವ್ಯಕ್ತಿ. ಮಧು ಕೊಲೆ ಆರೋಪಿ. ಆರು ವರ್ಷಗಳ ಹಿಂದೆ ನಾರಾಯಣಪ್ಪ ಮಧು ತಾಯಿಯನ್ನು ಕೊಲೆ ಮಾಡಿ ಜೈಲು ಸೇರಿದ್ದ. ಮೂರು ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದ ನಾರಾಯಣಪ್ಪ, ಮೂರು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ.

ತಾಯಿ ಕೊಲೆಗೈದ ಸೇಡು ತೀರಿಸಿಕೊಳ್ಳಲು ಮಧು ಕಾದಿದ್ದ ಎನ್ನಲಾಗಿದೆ. ನಾರಾಯಣಪ್ಪನ ಜೊತೆ ಮಧು ಜಗಳವಾಡಿದ್ದು, ಗಲಾಟೆ ವಿಕೋಪಕ್ಕೆ ಹೋಗಿದ್ದು, ನಾರಾಯಣಪ್ಪನ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ. ಬಳಿಕ ಮಧು ನಾಪತ್ತೆಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿ ಪತ್ತೆಗಾಗಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read