
ಶ್ರೀ ಮಾದಾರ ಚನ್ನಯ್ಯಶ್ರೀಗಳ ತಾಯಿ ಗಂಗಮ್ಮ(85) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಯ್ಯಶ್ರೀಗಳ ತಾಯಿ ಗಂಗಮ್ಮ ಕೊನೆಯುಸಿರೆಳೆದಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಹಿರೇಕಂದವಾಡಿ ಗ್ರಾಮದ ಬಳಿ ಇಂದು ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

