BREAKING: ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರು ಬಿದ್ದ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ!

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರು ಬಿದ್ದ ಘಟನೆಗೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಏರಿಕೆಯಾಗಿದೆ.

ರೈಲಿನಿಂದ ಬಿದ್ದ 6 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಥಾಣೆಯ ಮುಂಬ್ರಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ದೀವಾ-ಕೋಪರ್ ಪುಷ್ಪಕ್ ರೈಲಿನಿಂದ 12ಕ್ಕೂ ಹೆಚ್ಚು ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರು. ಇತ್ತೀಚಿನ ಮಾಹಿತಿ ಪ್ರಕಾರ ಮತ್ತೋರ್ವ ಗಾಯಾಳು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ

ರೈಲು ಮುಂಬೈ ಸಿಎಸ್ ಟಿನಿಲ್ದಾಣದಿಂದ ಲಖನೌಗೆ ತೆರಳುತ್ತಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ. ರೈಲಿನಲ್ಲಿ ಅತಿಯಾದ ಜನಸಂದಣಿಯಿಂದಾಗಿ ಹಲವು ಪ್ರಯಾಣಿಕರು ಬಾಗಿಲಿನಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದರು. ಈ ವೇಳೆ ಅನಾಹುತ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read