HomeKarnatakaSHOCKING NEWS: ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ

SHOCKING NEWS: ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಸುಮಾರು 35 ವರ್ಷದ ಯುವಕನೊಬ್ಬ ಚಲಿಸುತ್ತಿದ್ದ ರೈಲಿನಿಂದ ಏಕಾಏಕಿ ತುಂಗಾ ನದಿಗೆ ಹಾರಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಆಗಮಿಸಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ತುಂಗಾ ನದಿ ಬಳಿ ನದಿಗೆ ಹಾರಿದ್ದಾನೆ. ಇದನ್ನು ಕಂಡ ಪ್ರಯಾಣಿಕರೊಬ್ಬರು ತಕ್ಷಣ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ನದಿಯಿಂದ ಮೃತದೇಹ ಹೊರತೆಗೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನದಿಯಲ್ಲಿ ನೀರು ಬತ್ತಿ ಹೋಗಿರುವುದರಿಂದ ಯುವಕ ಎತ್ತರದಿಂದ ಹಾರಿರುವ ಪರಿಣಾಮ ಆತನ ತಲೆಗೆ ಕಲ್ಲು ಜಜ್ಜಿ ಬಲವಾದ ಪೆಟ್ಟು ಬಿದ್ದಿದೆ. ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular