HomeKarnatakaBREAKING NEWS: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

BREAKING NEWS: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

27 ವರ್ಷದ ಎಂ.ಜಿ.ನಯನಾ ಆತ್ಮಹತ್ಯೆ ಮಾಡಿಕೊಂಡವರು. ಚಲಿಸುತ್ತಿದ್ದ ರೈಲಿನಿಂದಲೇ ನದಿಗೆ ಹಾರಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಗೇಶಿಯ ಪಡಸಾಲೆಹಟ್ಟಿ ನಿವಾಸಿ.

ಯುವತಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular