HomeIndiaತಂದೆ ಸಾವಿನ ಸುದ್ದಿ ತಿಳಿದು ಬಾವಿಗೆ ಹಾರಿ ಪ್ರಾಣಬಿಟ್ಟ 11 ವರ್ಷದ ಪುತ್ರಿ

ತಂದೆ ಸಾವಿನ ಸುದ್ದಿ ತಿಳಿದು ಬಾವಿಗೆ ಹಾರಿ ಪ್ರಾಣಬಿಟ್ಟ 11 ವರ್ಷದ ಪುತ್ರಿ

ತನ್ನ ತಂದೆಯ ಸಾವಿನ ಸುದ್ದಿ ತಿಳಿದ 11 ವರ್ಷದ ಬಾಲಕಿ ಬಾವಿಗೆ ಹಾರಿ ಸಾವನ್ನಪ್ಪಿರುವ ದುರಂತ ಘಟನೆ ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ನಡೆದಿದೆ.

ಮಗುವಿನ ಸಾವು ಬರ್ಖೇಡಾ ಜಾಗೀರ್ ಗ್ರಾಮದಲ್ಲಿ ವರದಿಯಾಗಿದೆ ಎಂದು ದೇಹತ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಪಹಲ್ವಾನ್ ಚೌಹಾನ್ ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯ ತಂದೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಂದೆಯ ಸಾವಿನ ಸುದ್ದಿಯನ್ನು ಅವರ ಕುಟುಂಬ ಸದಸ್ಯರೊಂದಿಗೆ ಫೋನ್‌ನಲ್ಲಿ ಹಂಚಿಕೊಂಡ ನಂತರ ಮನೆಯಿಂದ ಹೊರಗೆ ಹೋದ ಬಾಲಕಿ ಮನೆಗೆ ವಾಪಸ್ ಆಗಲಿಲ್ಲ. ಆಕೆಯ ಕುಟುಂಬ ಸದಸ್ಯರು ಮತ್ತು ಸ್ಥಳೀಯರು ಹುಡುಕಾಟ ಆರಂಭಿಸಿದ್ದು, ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular