BIG NEWS: ಭಾರೀ ಬಿರುಗಾಳಿಗೆ ಕುಸಿದು ಬಿದ್ದ ವಿಗ್ರಹಗಳು

ಭಾರೀ ಬಿರುಗಾಳಿ ಸಹಿತ ಮಳೆಗೆ ಮಧ್ಯಪ್ರದೇಶದ ಉಜ್ಜಯಿನಿ ನಗರದ ಮಹಾಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ಬೃಹತ್ ವಿಗ್ರಹಗಳು ಕುಸಿದು ಬಿದ್ದಿವೆ. ಮಹಾಕಾಲ್ ಲೋಕ ಕಾರಿಡಾರ್‌ನಲ್ಲಿ ಸ್ಥಾಪಿಸಲಾದ ‘ಸಪ್ತಋಷಿಗಳ’ ವಿಗ್ರಹಗಳ ಪೈಕಿ ಆರು ಬಿರುಗಾಳಿಯಿಂದ ಕುಸಿದು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ನಡೆದ ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಘಟನೆಯ ನಂತರ ದೇವಸ್ಥಾನವನ್ನ ಕೆಲವು ಗಂಟೆಗಳ ಕಾಲ ಮುಚ್ಚಲಾಗಿತ್ತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದರು.
ಭಾನುವಾರ ನಡೆದ ಈ ಘಟನೆಯು ರಾಜ್ಯದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಲು ವಿರೋಧ ಪಕ್ಷ ಕಾಂಗ್ರೆಸ್‌ಗೆ ಅಸ್ತ್ರವಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read