
ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ನಡೆದ ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಘಟನೆಯ ನಂತರ ದೇವಸ್ಥಾನವನ್ನ ಕೆಲವು ಗಂಟೆಗಳ ಕಾಲ ಮುಚ್ಚಲಾಗಿತ್ತು.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದರು.
ಭಾನುವಾರ ನಡೆದ ಈ ಘಟನೆಯು ರಾಜ್ಯದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಲು ವಿರೋಧ ಪಕ್ಷ ಕಾಂಗ್ರೆಸ್‌ಗೆ ಅಸ್ತ್ರವಾಯಿತು.

