BREAKING NEWS: ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್ ದಾಖಲು

ಕುಮಟಾ: ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ.

ದ್ವೇಷ ಭಾಷಣ ಮಾಡಿದ್ದಾರೆ ಎಂದು ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153ರಡಿ ಪ್ರಕರಣ ದಾಖಲಾಗಿದೆ.

ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಂಸದ ಅನಂತ ಕುಮಾರ್ ಹೆಗಡೆ, ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದಪಳ್ಳಿ ಮಸೀದಿ ನಿರ್ನಾಮ ಮಾಡುತ್ತೇವೆ. ಎಲ್ಲೆಲ್ಲಿ ದೇವಸ್ಥಾನಗಳನ್ನು ಒಡೆದು ಮಸೀದಿ ನಿರ್ಮಿಸಿದ್ದಾರೋ ಅಲ್ಲೆಲ್ಲ ಮಸೀದಿ ನಿರ್ನಾಮ ಮಾಡಿ ದೇವಸ್ಥಾನ ನಿರ್ಮಿಸುತ್ತೇವೆ. ಸಾವಿರಾರು ವರ್ಷಗಳ ಸೇಡು ಇದು ಸೇಡಿಗೆ ಸೇಡು. ಋಣ ತೀರಿಸದಿದ್ದರೆ ಹಿಂದೂ ರಕ್ತ ಎನ್ನಲ್ಲ ಎಂದು ಆಕ್ರೋಶಭರಿತರಾಗಿ ಮಾತನಾಡಿದ್ದರು. ಅಲ್ಲದೇ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಸಂಸದ ಭಾಷಣ ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಇದೀಗ ಸಂಸದರ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read