HomeKarnatakaಸಂಸದ ಬಿ.ವೈ. ರಾಘವೇಂದ್ರ ನಿವಾಸಕ್ಕೆ ಶ್ರೀಲಂಕಾ ಸಂಸದ ಶ್ರೀಧರನ್ ಶಿವಜ್ಞಾನಂ ಭೇಟಿ

ಸಂಸದ ಬಿ.ವೈ. ರಾಘವೇಂದ್ರ ನಿವಾಸಕ್ಕೆ ಶ್ರೀಲಂಕಾ ಸಂಸದ ಶ್ರೀಧರನ್ ಶಿವಜ್ಞಾನಂ ಭೇಟಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸಕ್ಕೆ ಶ್ರೀಲಂಕಾ ದೇಶದ ಜಾಫ್ನಾ ಮತ್ತು ಕಿಲಿನೊಚ್ಚಿ ಚುನಾವಣಾ ಜಿಲ್ಲೆಯ ಸಂಸದ ಶ್ರೀಧರನ್ ಶಿವಜ್ಞಾನಂ (Shritharan Sivagnanam) ಅವರು ತಮ್ಮ ಪ್ರಮುಖರ ನಿಯೋಗದೊಂದಿಗೆ ಆತ್ಮೀಯವಾಗಿ ಭೇಟಿ ನೀಡಿದ್ದರು.

ಈ ಸೌಹಾರ್ದಯುತ ಭೇಟಿಯ ಸಂದರ್ಭದಲ್ಲಿ, ಅವರನ್ನು ಅತ್ಯಂತ ಗೌರವಪೂರ್ವಕವಾಗಿ ಬರಮಾಡಿಕೊಂಡು ಮಲೆನಾಡಿನ ಸಂಪ್ರದಾಯದಂತೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಭಾರತ ಮತ್ತು ಶ್ರೀಲಂಕಾ ದೇಶಗಳ ನಡುವಿನ ಸುದೀರ್ಘ ಸಾಂಸ್ಕೃತಿಕ ಬಾಂಧವ್ಯ, ಉಭಯ ದೇಶಗಳ ಪ್ರಚಲಿತ ರಾಜಕೀಯ ಹಾಗೂ ಪ್ರಾದೇಶಿಕ ಅಭಿವೃದ್ಧಿ ವಿದ್ಯಮಾನಗಳು ಸೇರಿದಂತೆ ವಿವಿಧ ಆಸಕ್ತಿದಾಯಕ ವಿಷಯಗಳ ಕುರಿತು ಅತ್ಯಂತ ಸೌಹಾರ್ದಯುತವಾಗಿ ಸುದೀರ್ಘ ಚರ್ಚೆ ನಡೆಸಲಾಯಿತು.

ಮಲೆನಾಡಿನ ಕೃಷಿ ಪದ್ಧತಿ, ಪ್ರವಾಸೋದ್ಯಮ ಹಾಗೂ ಇತಿಹಾಸದ ಬಗ್ಗೆ ಅವರು ಅಪಾರ ಆಸಕ್ತಿ ವ್ಯಕ್ತಪಡಿಸಿದ್ದು, ಈ ಅಂತರರಾಷ್ಟ್ರೀಯ ಭೇಟಿ ಅತ್ಯಂತ ಅರ್ಥಪೂರ್ಣ ಮತ್ತು ಸ್ಮರಣೀಯವಾಗಿ ಮೂಡಿಬಂದಿದೆ. ಈ ಸಂದರ್ಭದಲ್ಲಿ ಅವರೊಂದಿಗೆ ಆಗಮಿಸಿದ್ದ ಶ್ರೀಲಂಕಾದ ಗಣ್ಯರು ಹಾಗೂ ನಮ್ಮ ಭಾಗದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular