ಅಪ್ರಾಪ್ತ ಬಾಲಕಿಯರೊಂದಿಗೆ ಬಿಜೆಪಿ ಶಾಸಕರ ಅನುಚಿತ ವರ್ತನೆ ಆರೋಪ; ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

ಮಧ್ಯಪ್ರದೇಶದ ಬಿಜೆಪಿ ಶಾಸಕ, ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಗೌರಿ ಶಂಕರ್ ಬಿಸೆನ್ ಅಪ್ರಾಪ್ತ ಬಾಲಕಿಯರನ್ನ ಅನುಚಿತವಾಗಿ ಸ್ಪರ್ಶಿಸಿದ್ದಾರೆಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು ಇದನ್ನು ಮಧ್ಯಪ್ರದೇಶ ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡ ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ ಶಾಸಕ ಗೌರಿ ಶಂಕರ್ ಬಿಸೆನ್ ಅಪ್ರಾಪ್ತ ಬಾಲಕಿಯರೊಂದಿಗೆ ಪೋಸ್ ನೀಡುತ್ತಿರುವುದನ್ನು ಕಾಣಬಹುದು. ಬಾಲಾಘಾಟ್ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ ಎಂದು ವಿರೋಧ ಪಕ್ಷ ಹೇಳಿದೆ.

ಮಧ್ಯಪ್ರದೇಶ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿ ಶಾಸಕ, ಮಾಜಿ ಸಚಿವ ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಗೌರಿ ಶಂಕರ್ ಬಿಸೆನ್ ಅವರು ಹೆಣ್ಣುಮಕ್ಕಳೊಂದಿಗೆ ನಾಚಿಕೆಗೇಡಿನ ಕೃತ್ಯವನ್ನು ಮಾಡುತ್ತಿದ್ದಾರೆ ಎಂದಿದೆ.

ಪೋಸ್ಟ್ ಕುರಿತು ಪ್ರತಿಕ್ರಿಯಿಸಿದ ಮುಂಬೈ ಕಾಂಗ್ರೆಸ್ ಸೇವಾದಳದ ರಾಜ್ಯ ಸಂಯೋಜಕ ಮುಖೇಶ್ ಗುಪ್ತಾ, “ಈ ಹುಡುಗಿಯರಿಗೆ ಮಹಿಳಾ ವೈದ್ಯರಿಂದ ಸಲಹೆ ನೀಡಬೇಕು, ಅವರ ವರದಿಯನ್ನು ಸಾರ್ವಜನಿಕಗೊಳಿಸಬೇಕು. ಹುಡುಗಿಯರೊಂದಿಗೆ ಇಂತಹ ಕೃತ್ಯ ನಾಚಿಕೆಗೇಡಿನ ಸಂಗತಿ. ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ನಾಚಿಕೆಯಾಗಬೇಕು ಎಂದಿದ್ದಾರೆ.

ಕಾಂಗ್ರೆಸ್ ಆರೋಪವನ್ನು ಬಲವಾಗಿ ತಳ್ಳಿಹಾಕಿದ ಬಿಜೆಪಿ, ಅಪ್ರಾಪ್ತ ಬಾಲಕಿಯರನ್ನು ಒಳಗೊಂಡ ವಿಡಿಯೋವನ್ನು ಟ್ವೀಟ್ ಮಾಡಿದ್ದಕ್ಕಾಗಿ ವಿರೋಧ ಪಕ್ಷವನ್ನು ಟೀಕಿಸಿದೆ ಮತ್ತು ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. “ಈ ಹುಡುಗಿಯರು ಅವರ ಮೊಮ್ಮಗಳ ವಯಸ್ಸಿನವರು ಮತ್ತು ಬಿಸೆನ್ ಅವರನ್ನು ಸಾರ್ವಜನಿಕವಾಗಿ ಪ್ರೀತಿಯಿಂದ ಭೇಟಿಯಾಗುತ್ತಿದ್ದಾರೆ” ಎಂದು ರಾಜ್ಯ ಬಿಜೆಪಿ ವಕ್ತಾರ ನರೇಂದ್ರ ಸಿಂಗ್ ಸಲೂಜಾ ಹೇಳಿದ್ದಾರೆ. ಮಧ್ಯಪ್ರದೇಶದ ಗೃಹ ಸಚಿವ ಮತ್ತು ಸರ್ಕಾರದ ವಕ್ತಾರ ನರೋತ್ತಮ್ ಮಿಶ್ರಾ ಕೂಡ ಕಾಂಗ್ರೆಸ್ ತನ್ನ ಹೇಯ ಮನಸ್ಥಿತಿ ಪ್ರದರ್ಶಿಸಿದೆ ಎಂದಿದ್ದಾರೆ.

https://twitter.com/FreePressMP/status/1672132741872119808?ref_src=twsrc%5Etfw%7Ctwcamp%5Etweetembed%7Ctw

https://twitter.com/AAPNareshBalyan/status/1672161292860403722?ref_src=twsrc%5Etfw%7Ctwcamp%5Etweetembed%7Ctwterm%5E1672161

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read