HomeKarnatakaಜಗತ್ತಿಗೆ ಯೋಗದ ಮಹತ್ವ ಪರಿಚಯಿಸಿದ ದೇಶ ಭಾರತ: 150 ದೇಶಗಳಲ್ಲಿ ಯೋಗಾಭ್ಯಾಸ: ಸಂಸದ ಬಿ.ವೈ.ರಾಘವೇಂದ್ರ

ಜಗತ್ತಿಗೆ ಯೋಗದ ಮಹತ್ವ ಪರಿಚಯಿಸಿದ ದೇಶ ಭಾರತ: 150 ದೇಶಗಳಲ್ಲಿ ಯೋಗಾಭ್ಯಾಸ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ವಿಶ್ವಕ್ಕೆ ಯೋಗ ಮತ್ತು ಯೋಗದ ಮಹತ್ವವನ್ನು ಪರಿಚಯಿಸಿದ ದೇಶ ಭಾರತ ಎಂಬ ಹೆಮ್ಮೆ ನಮ್ಮದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆಯು ಉದ್ಯಮನಿಧಿ ಯೋಜನೆ ಯಡಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗದ ವಿನೋಬನಗರದಲ್ಲಿ ನೂತನವಾಗಿ ನಿರ್ಮಿಸಲಾದ ವಾಣಿಜ್ಯ ಸಂಕೀರ್ಣ ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅಜಿತ ಯೋಗಕೇಂದ್ರವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಯೋಗದಲ್ಲಿ ಭಾರತೀಯರ ಸಾಧನೆ ಎಲ್ಲರೂ ಅನುಸರಿಸುವಂತದ್ದು. ವಿಶ್ವದ ಸುಮಾರು 150 ದೇಶಗಳಲ್ಲಿ ಯೋಗವನ್ನು ಅಭ್ಯಸಿಸುತ್ತಿರುವುದು ಹೆಮ್ಮೆ ಎನಿಸಿದೆ. ಇದರಿಂದಾಗಿ ಜಾಗತಿಕವಾಗಿ ಭಾರತ ವಿಶ್ವಗುರುವಾಗಿ ಗುರುತಿಸಲಾಗುತ್ತಿದೆ. ಯೋಗ ವಿಶ್ವಮಾನ್ಯವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತಮ ಸಂಸ್ಕೃತಿ, ಸಂಸ್ಕಾರಗಳಿರುವಲ್ಲಿ ಈ ರೀತಿಯ ಸದಾಚಾರ ಸದ್ವಿಚಾರಗಳು ಆಚರಣೆ ಬಂದು, ಸರ್ವರ ಹಿತಕಾಯುವ ಕಾರ್ಯಗಳು ನಡೆಯುತ್ತವೆ. ಶಾಸಕ ಚನ್ನಬಸಪ್ಪ ಅವರ ಸಮಾಜಮುಖಿ ಚಿಂತನೆಯ ಫಲದಿಂದಾಗಿ ಯೋಗ ಕೇಂದ್ರ ಶುಭಾರಂಭಗೊಂಡಿರುವುದು ಎಲ್ಲರಿಗೂ ಸಂತಸದ ಸಂಗತಿಯಾಗಿದೆ. ಅದಕ್ಕಾಗಿ ಶಾಸಕರು ಅಭಿನಂದನಾರ್ಹರು ಎಂದರು.

ಈ ಸಂದರ್ಭದಲ್ಲಿ ಶಾಸಕ ಎಸ್. ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಂದ್ರಭೂಪಾಲ್, ಯೋಗ ಶಿಕ್ಷಕರಾದ ಶ್ರೀನಿವಾಸಮೂರ್ತಿ, ಅರವಿಂದ್, ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular