Shocking: ಮೃತ ಪತಿಯ ಸ್ನೇಹಿತರಿಂದಲೇ ಮಹಿಳೆ ಮೇಲೆ ಗ್ಯಾಂಗ್‌ ರೇಪ್

ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಂಜೀವನಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಮೃತ ಪತಿಯ ನಾಲ್ವರು ಸ್ನೇಹಿತರು ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ.

ಸಂಜೀವಿನಿ ನಗರ ಪೊಲೀಸರು ಸಂತ್ರಸ್ತೆಯ ದೂರಿನ ಮೇರೆಗೆ ಮನೆಯ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಎಸ್ಪಿ ಸಂಜಯ್ ಅಗರವಾಲ್ ಮಾಹಿತಿ ನೀಡಿ, 32 ವರ್ಷದ ಮಹಿಳೆಯ ಪತಿ ಕೆಲವು ದಿನಗಳ ಹಿಂದೆ ನಿಧನರಾಗಿದ್ದಾರೆ. ಅದರ ನಂತರ ಮಹಿಳೆ ಬಾಡಿಗೆ ಮನೆಗಾಗಿ ಹುಡುಕುತ್ತಿದ್ದಳು. ಮನೆ ಹುಡುಕಾಟದ ಸಮಯದಲ್ಲಿ, ಸಂತ್ರಸ್ತೆ ತನ್ನ ಮೃತ ಪತಿಯ ಸ್ನೇಹಿತರ ಸಹಾಯ ಪಡೆದಿದ್ದಾಳೆ.

ಅವಕಾಶವನ್ನು ಬಳಸಿಕೊಂಡ ಮೂವರು ಆರೋಪಿಗಳು ಬಾಡಿಗೆಗೆ ಕೊಠಡಿ ತೋರಿಸುವ ನೆಪದಲ್ಲಿ ಮಹಿಳೆಯನ್ನು ಮನೆಗೆ ಕರೆದೊಯ್ದಿದ್ದಾರೆ. ಮದ್ಯ ಸೇವಿಸಿದ ಬಳಿಕ ಮೂವರು ಮಹಿಳೆಯ ಮೇಲೆ ಸರದಿಯಂತೆ ಅತ್ಯಾಚಾರ ಎಸಗಿದ್ದಾರೆ. ಸದ್ಯ ಮಹಿಳೆಯ ದೂರಿನ ಮೇರೆಗೆ ಮೂವರು ಆರೋಪಿಗಳು ಹಾಗೂ ಮನೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಲ್ಲರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read