ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಚಾಲಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ.
ಸಂಸದ, ಮಾಜಿ ಸಚಿವ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಸೂಸೈಡ್ ಮಾಡಿಕೊಂಡಿದ್ದಾನೆ.
ಜಿಲ್ಲಾ ಪಂಚಾಯಿತಿ ಗುತ್ತಿಗೆ ಚಾಲಕ ಎನ್ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆತ್ಮಹತ್ಯೆಗೆ ನಿಖರ ಹಾಗೂ ಸುಧಾಕರ್ ವಿರುದ್ಧ ಚಾಲಕ ಮಾಡಿರುವ ಆರೋಪವೇನು ಎಂಬುದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
TAGGED:ಆತ್ಮಹತ್ಯೆ