HomeKarnatakaಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ

ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದ ಹಲವೆಡೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅಪಾರ ನಗದು ವಶಕ್ಕೆ ಪಡೆಯಲಾಗಿದೆ.

ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ನಗದು ವಶಕ್ಕೆ:.ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆಯಲಾಗಿದೆ. ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ, ಎಸ್.ಎಸ್.ಟಿ. ಹಾಗೂ ಎಫ್.ಎಸ್.ಟಿ. 3 ರ ನಾಗಾನಾಯ್ಕ, ಪೋಲೀಸ್ ಸಿಬ್ಬಂದಿ ತಡೆದು ತಪಾಸಣೆ ಮಾಡಿದಾಗ ಕಾರ್ ನಲ್ಲಿ ಓಂಪ್ರಕಾಶ್ ಎನ್ನುವವರಿಗೆ ಸೇರಿದ್ದ ದಾಖಲೆ ಇರದ 3.82 ಲಕ್ಷ ರೂ. ನಗದು ಇರುವುದು ಕಂಡುಬಂದಿದೆ.

ನಿಯಮಾನುಸಾರ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಆಗಿರುವ ಹು-ಧಾ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಪೋಲೀಸ್ ಇನ್ಸ್ಪೆಕ್ಟರ್ ಕಿರಣ್ ಕುಮಾರ, ಎಎಸ್ಐ ಆರ್.ಜಿ. ನಾಯ್ಕ, ಎಎಸ್ಐ ಜಿ.ಸಿ. ಕಡೇಮನಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ವಶಪಡಿಸಿಕೊಂಡಿರುವ ದಾಖಲೆ ಇಲ್ಲದ ಹಣವನ್ನು ಖಜಾನೆಯಲ್ಲಿ ಡಿಪಾಸಿಟ್ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಜಿಲ್ಲಾ ಸೀಜರ್ ಕಮಿಟಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular