HomeKarnatakaರಾಜ್ಯದ ಉಳಿದ 14 ಲೋಕಸಭೆ ಕ್ಷೇತ್ರಗಳಿಗೆ ಏ. 12ರಿಂದ ನಾಮಪತ್ರ ಸಲ್ಲಿಕೆ ಆರಂಭ

ರಾಜ್ಯದ ಉಳಿದ 14 ಲೋಕಸಭೆ ಕ್ಷೇತ್ರಗಳಿಗೆ ಏ. 12ರಿಂದ ನಾಮಪತ್ರ ಸಲ್ಲಿಕೆ ಆರಂಭ

ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸಲಾಗುವುದು.

ಏ.19 ನಾಮಪತ್ರ ಸಲ್ಲಿಸಲು ಕೊನೆಯ ದಿನ, ಏ.20 ನಾಮಪತ್ರಗಳ ಪರಿಶೀಲನೆ ಹಾಗೂ ಏ.22 ನಾಮಪತ್ರ ಹಿಂಪಡೆಯುವ ದಿನಾಂಕವಾಗಿದ್ದು, ಈ ಅವಧಿಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಾಗಿರುವುದರಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಏ. 12ರ ಬೆಳಗ್ಗೆ 6 ರಿಂದ ಏ-22 ರ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದ 100 ಮೀ. ವ್ಯಾಪ್ತಿಯ ಸುತ್ತಮುತ್ತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ನಿಷೇದಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳ ವಾಹನ ಒಳಗೊಂಡಂತೆ 3 ವಾಹನಗಳಿಗೆ ಮಾತ್ರ ಕಚೇರಿ ಆವರಣದಲ್ಲಿ ನಿಲುಗಡೆಗೆ ಅನುಮತಿ ನೀಡಿದೆ. ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸುವ ಅಭ್ಯರ್ಥಿಯನ್ನು ಒಳಗೊಂಡಂತೆ 5 ಜನರಿಗೆ ಮಾತ್ರ ಅನುಮತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

5 ಮಂದಿಗಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು, ಆಯುಧ ಶಸ್ತ್ರಾಸ್ತ್ರ ಮತ್ತು ಮಾರಾಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿರ್ಬಂಧಿಸಿದೆ. ಚುನಾವಣಾ ಕಾರ್ಯದ ಮೇಲೆ ನಿರತವಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣಾ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ, ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿದೆ.

ಯಾವುದೇ ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವಂತಿಲ್ಲ. ಯಾವುದೇ ರೀತಿಯ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡವಂತಿಲ್ಲ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳನ್ನು ನಿಷೇಧಿಸಿದೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನಿನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

ಈ ಆದೇಶವು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular