HomeIndiaBIG NEWS: 2024ರಲ್ಲೂ ನಾನೇ ಗೆದ್ದು ಬರುತ್ತೇನೆ: ಪ್ರಧಾನಿ ಮೋದಿ ವಿಶ್ವಾಸ

BIG NEWS: 2024ರಲ್ಲೂ ನಾನೇ ಗೆದ್ದು ಬರುತ್ತೇನೆ: ಪ್ರಧಾನಿ ಮೋದಿ ವಿಶ್ವಾಸ

ನವದೆಹಲಿ: 2024ರ ಚುನಾವಣೆಯಲ್ಲೂ ಮತ್ತೆ ನಾನೇ ಗೆದ್ದು ಬರುತ್ತೇನೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಜಾರಿಗೆ ತರಲಾದ ಮಹಾತ್ವಾಕಾಂಕ್ಷಿ ಜಿಲ್ಲಾ ಯೋಜನೆಗಳು ಸ್ಪೂರ್ತಿದಾಯಕ ಜಿಲ್ಲೆಗಳಾಗಿ ಹೊರಹೊಮ್ಮಿದ್ದು, ಮುಂದಿನ ವರ್ಷ ಅಕ್ಟೋಬರ್ -ನವೆಂಬರ್ ನಲ್ಲಿ ಮಹತ್ವಾಕಾಂಕ್ಷಿ ವಲಯಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ 2024ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಂದೇಶವನ್ನು ಪ್ರಧಾನಿ ಮೋದಿ ರವಾನಿಸಿದ್ದಾರೆ. ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯ ಭಾಗವಾಗಿ 100 ಮಹತ್ವಾಕಾಂಕ್ಷಿ ವಲಯಗಳ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, 2024ರ ಅಕ್ಟೋಬರ್ ನವೆಂಬರ್ ನಲ್ಲಿ ನಾವು ಯೋಜನೆಯ ಮೌಲ್ಯ ಮಾಪನ ಮಾಡಲು ಇಲ್ಲಿ ಸೇರುತ್ತೇವೆ ಎಂಬ ಭರವಸೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular