HomeKarnatakaBIG NEWS: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಯತಿಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

BIG NEWS: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಯತಿಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಕೊಪ್ಪಳ: ತಂದೆ ಹಾಗೂ ಹೈಕಮಾಂಡ್ ನಿರ್ಧರಿಸಿದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಧರ್ಮಗುರುಗಳ ಕಾರ್ಯಕ್ರಮದಲ್ಲಿ ಮೌಲ್ವಿಗಳ ಪಕ್ಕದಲ್ಲಿ ಕುಳಿತುಕೊಂಡಿದ್ದನ್ನು ಉಗ್ರವಾದಿಗಳಿಗೆ ಹೋಲಿಸುವುದು ಸರಿಯಲ್ಲ. ಕನ್ನಡ ನಾಡು ಶಾಂತಿ, ಸೌಹಾರ್ದತೆ, ಜಾತ್ಯಾತೀತತೆಗೆ ಹೆಸರಾಗಿದೆ. ಬಿಜೆಪಿ ಶಾಸಕ ಯತ್ನಾಳ್ ಸೇರಿದಂತೆ ಆ ಪಕ್ಷದ ಮುಖಂಡರಿಂದ ಜಾತಿ ಧರ್ಮ ಸಹಿಷ್ಣುತೆ ನಿರೀಕ್ಷಿಸುವುದು ಅಸಾಧ್ಯ ಎಂದು ಹೇಳಿದ್ದಾರೆ.

ಅಪ್ಪ ಹಾಗೂ ಪಕ್ಷದ ಹೈಕಮಾಂಡ್ ನಿರ್ಧರಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧವಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular