HomeKarnatakaBIG NEWS : ಅಮಿತ್ ಶಾ ಭೇಟಿಗೆ ದೆಹಲಿಗೆ ತೆರಳಿದ ಸಂಸದ H.D ಕುಮಾರಸ್ವಾಮಿ..!

BIG NEWS : ಅಮಿತ್ ಶಾ ಭೇಟಿಗೆ ದೆಹಲಿಗೆ ತೆರಳಿದ ಸಂಸದ H.D ಕುಮಾರಸ್ವಾಮಿ..!

ನವದೆಹಲಿ : ಮಂಡ್ಯದಲ್ಲಿ ಗೆದ್ದು ಬೀಗಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ದೆಹಲಿಗೆ ಬರುವಂತೆ ಅಮಿತ್ ಶಾ ಬುಲಾವ್ ನೀಡಿದ್ದು, ಈ ಹಿನ್ನೆಲೆ ಹೆಚ್ಡಿಕೆ ಇಂದು ದೆಹಲಿಗೆ ಹಾರಿದ್ದಾರೆ.

ಇಂದು ಸಂಜೆ ಖಾಸಗಿ ಹೋಟೆಲ್ ನಲ್ಲಿ ಎನ್ ಡಿ ಎ ಮಿತ್ರಪಕ್ಷಗಳ ಸಣೆ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ದೆಹಲಿಯ ಬಿಜೆಪಿ ಕಚೇರಿಗೆ ಬಂದು ಮಾತನಾಡುವಂತೆ ಹೆಚ್ ಡಿ ಕುಮಾರಸ್ವಾಮಿಗೆ ಅಮಿತ್ ಶಾ ಆಹ್ವಾನ ನೀಡಿದ್ದರು. ಗೆದ್ದ ಅಭ್ಯರ್ಥಿಗಳ ಜೊತೆ ಅಮಿತ್ ಶಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಭರ್ಜರಿ ಗೆಲುವು ದಾಖಲಿಸಿದ್ದಾರೆ.
2 ಲಕ್ಷ ಮತಗಳ ಅಂತರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಜಯಭೇರಿ ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular