ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ, ದೇವಸ್ಥಾನದ ಸಮೀಪದ ಪ್ರವಾಸಿ ಸ್ಥಳದ ಪಿಕ್ನಿಕ್ ಸ್ಪಾಟ್‌ನಲ್ಲಿದ್ದ ದಂಪತಿಗಳ ಮೇಲೆ ದಾಳಿ ನಡೆದಿದೆ. ಪತಿಯನ್ನು ಮರಕ್ಕೆ ಕಟ್ಟಿ ಹಾಕಲಾಗಿದ್ದು, ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ದಾಳಿಕೋರರು ಅತ್ಯಾಚಾರ ಹಾಗೂ ಹಲ್ಲೆಯನ್ನು ಚಿತ್ರೀಕರಿಸಿದ್ದು, ದಂಪತಿ ಪೊಲೀಸರಿಗೆ ದೂರು ನೀಡಿದರೆ ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಕ್ಟೋಬರ್ 21 ರಂದು ಈ ಪೈಶಾಚಿಕ ಕೃತ್ಯ ನಡೆದಿದ್ದು, ಮರುದಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವು ಶಂಕಿತರನ್ನು ಬಂಧಿಸಿದ್ದಾರೆ.
ಇದರ ಮಧ್ಯೆ ಇಂದೋರ್ ನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರು ದಿನಗೂಲಿ ಕೆಲಸಗಾರರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಇಂದೋರ್ ಘಟನೆಯ ನಂತರ, ರಾಜ್ಯ ಕಾಂಗ್ರೆಸ್ ನಾಯಕ ಜಿತು ಪಟ್ವಾರಿ, ಆಡಳಿತಾರೂಢ ಬಿಜೆಪಿಯನ್ನು ಎಕ್ಸ್‌ನಲ್ಲಿ ಟೀಕಿಸಿದ್ದು “ಮಗಳು ರಸ್ತೆಯಲ್ಲಿ ಬೆತ್ತಲೆಯಾಗಿರುತ್ತಾಳೆ (ಈ ಸಂದರ್ಭದಲ್ಲಿ) ಮುಖ್ಯಮಂತ್ರಿ ಕಾರ್ಯಕ್ರಮವೊಂದರಲ್ಲಿ ನಿರತರಾಗಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.
ಪಟ್ವಾರಿ ಅವರು ಇಂದೋರ್‌ನಲ್ಲಿ ಮಹಿಳೆ ಕಂಡುಬಂದ ದೃಶ್ಯವನ್ನು ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣಕ್ಕೆ ಹೋಲಿಸಿದ್ದು “ತನ್ನನ್ನು ‘ದೇವರು’ ಎಂದು ಪರಿಗಣಿಸುವ ಮುಖ್ಯಮಂತ್ರಿಗೆ ದ್ರೌಪದಿಯ ವಸ್ತ್ರಾಪಹರಣವನ್ನು ನೋಡಲಾಗುವುದಿಲ್ಲವೇ?” ‘ನಮ್ಮ ಹೆಣ್ಣು ಮಕ್ಕಳ ಸ್ಥಿತಿ ನೋಡಿ ನನಗೆ ಸಿಟ್ಟು, ಆತಂಕವಿದೆ, ನಮ್ಮ ಹೆಣ್ಣು ಮಕ್ಕಳ ಮೇಲಿನ ಅಪರಾಧಗಳು ನಿಲ್ಲುತ್ತಿಲ್ಲ, ಆದರೆ ಮುಖ್ಯಮಂತ್ರಿ ಕಣ್ಣು ಮುಚ್ಚಿ ಕುಳಿತಿದ್ದಾರೆ’ ಎಂದು ಹೇಳಿದ್ದಾರೆ.