ಸಿಹಿ ವಿತರಣೆಗೆ ತೆರಳುವಾಗಲೇ ನಡೆದಿತ್ತು ದುರಂತ; ಎದೆ ನಡುಗಿಸುತ್ತೆ ಭೀಕರ ಅಪಘಾತದ ವಿಡಿಯೋ…!

ಕುಟುಂಬದಲ್ಲಿ ನಡೆದಿದ್ದ ಸಂತಸದ ಕಾರ್ಯಕ್ರಮದ ಸಂದರ್ಭದಲ್ಲಿ ಸಂಬಂಧಿಗಳಿಗೆ ಸಿಹಿ ವಿತರಿಸಲು ತೆರಳುತ್ತಿದ್ದವರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡು ಸಾವು – ಬದುಕಿನ ನಡುವೆ ಹೋರಾಡುತ್ತಿದ್ದಾನೆ ಇಂತಹದೊಂದು ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಭಾನುವಾರ ಮಧ್ಯಾಹ್ನ ಮಧ್ಯಪ್ರದೇಶದ ಜಬಲ್ಪುರದಲ್ಲಿ ಈ ಘಟನೆ ನಡೆದಿದ್ದು, ಭೀಕರ ಅಪಘಾತದ ದೃಶ್ಯ ಎದೆ ನಡುಗಿಸುವಂತಿದೆ. ಬೈಕ್ ಸವಾರರು ತೆರಳುತ್ತಿದ್ದಾಗ ಟ್ರಕ್ ಚಾಲಕ ನಿರ್ಲಕ್ಷದಿಂದ ಚಾಲನೆ ಮಾಡಿ ಈ ಅಪಘಾತವೆಸಗಿದ್ದಾನೆ ಅಷ್ಟೇ ಅಲ್ಲ, ಘಟನೆ ನಡೆದ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಅಪಘಾತದಲ್ಲಿ ಜಬಲ್ಪುರ ಸಮೀಪದ ಗ್ರಾಮದ ನಿವಾಸಿ ಲಕ್ಷ್ಮಣ್ ಸೇನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆತನ ಸಂಬಂಧಿ ದೀಪ್ ಚಂದ್ ಸೇನ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಟ್ರಕ್ ಚಾಲಕನ ನಿರ್ಲಕ್ಷ್ಯದಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಹೇಳಿರುವ ಪೊಲೀಸರು, ಸಿಸಿ ಟಿವಿ ದೃಶ್ಯಾವಳಿ ಪರಿಶೀಲಿಸಿ ಆತನ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ.

https://twitter.com/FreePressMP/status/1799763860444033390?ref_src=twsrc%5Etfw%7Ctwcamp%5Etweetembed%7Ctwterm%5E1799763860444033390%7Ctwgr%5Ed12fa2b26d4efeba75a19c3b69aaaf

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read