HomeKarnatakaಎಲೆಕ್ಷನ್ ಹೊತ್ತಲ್ಲೇ ಬಿಜೆಪಿ ಶಾಸಕನಿಗೆ ಶಾಕ್: ಬಂಧನ ಭೀತಿಯಲ್ಲಿ ಎಂ.ಪಿ. ಕುಮಾರಸ್ವಾಮಿ

ಎಲೆಕ್ಷನ್ ಹೊತ್ತಲ್ಲೇ ಬಿಜೆಪಿ ಶಾಸಕನಿಗೆ ಶಾಕ್: ಬಂಧನ ಭೀತಿಯಲ್ಲಿ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಪೊಲೀಸರಿಂದ ಬಂಧನ ಭೀತಿ ಎದುರಾಗಿದೆ.

ಎಂ.ಪಿ. ಕುಮಾರಸ್ವಾಮಿ ಅವರ ವಿರುದ್ಧ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರ ಮೂಲಕ ವಾರೆಂಟ್ ಜಾರಿಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೆಕ್ ಬೌನ್ಸ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. ಶಿಕ್ಷೆಯನ್ನು ಪ್ರಶ್ನಿಸಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮೇಲ್ಮನವಿ ಸಲ್ಲಿಸಿದ್ದರು. ಕುಮಾರಸ್ವಾಮಿ ಶಿಕ್ಷೆಗೆ ಸೆಷನ್ಸ್ ಕೋರ್ಟ್ ತಡೆ ನೀಡದ ಹಿನ್ನೆಲೆಯಲ್ಲಿ ಎಸಿಎಂಎಂ ನ್ಯಾಯಾಲಯಕ್ಕೆ ದೂರುದಾರ ಅರ್ಜಿ ಸಲ್ಲಿಸಿದ್ದರು. 30 ದಿನಗಳ ಒಳಗೆ ಹಣ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ವಾರೆಂಟ್ ಹೊರಡಿಸಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ವಾರಂಟ್ ಜಾರಿ ಮಾಡಲಾಗಿದೆ. ಒಟ್ಟು 8 ಪ್ರಕರಣದಲ್ಲಿ 1.38 ಕೋಟಿ ರೂಪಾಯಿ ಹಣ ಪಾವತಿಸಬೇಕಿದೆ. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಿದೆ ಎಂದು ಎಸಿಎಂಎಂ ಕೋರ್ಟ್ ಹೇಳಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular