HomeIndiaಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಜೈ ಶಂಕರ್‌ಗೆ ಮನವಿ

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಜೈ ಶಂಕರ್‌ಗೆ ಮನವಿ

ಇಸ್ರೇಲ್ & ಅಮೆರಿಕ ಇರಾನ್ ಮೇಲೆ ದಾಳಿಗಳನ್ನು ಆರಂಭಿಸಿದ ಬಳಿಕ ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಹಲವು ದೇಶಗಳು ತಮ್ಮ ವಾಯ ಪ್ರದೇಶವನ್ನು ನಿರ್ಬಂಧಿತ ವಲಯ ಎಂದು ಘೋಷಣೆ ಮಾಡಿದ್ದು, ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ.

ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಲೋಕಸಭೆಯಲ್ಲಿ ಪರಿಸ್ಥಿತಿ ಕುರಿತು ಸೋಮವಾರ ಮಾಹಿತಿ ನೀಡಿದ್ದಾರೆ.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಡಾ. ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿ, ಕನ್ನಡಿಗರ ರಕ್ಷಣೆಗಾಗಿ ಮನವಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಕೋಟ ಶ್ರೀನಿವಾಸ ಪೂಜಾರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಬೆಹರೈನ್, ಕತಾರ್, ದುಬೈ ಮುಂತಾದ ಗಲ್ಫ್ ರಾಷ್ಟ್ರಗಳ ಕನ್ನಡಿಗರ ಮನವಿಯಂತೆ, ಯುದ್ದ ಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಬಗ್ಗೆ ಕೇಂದ್ರ ವಿದೇಶಾಂಗ ಮಂತ್ರಿ ಶ್ರೀ ಜೈ ಶಂಕರ್ ರವರನ್ನು ಸಂಸದ ಡಾ. ಮಂಜುನಾಥರವರ ಜೊತೆ ಪಾರ್ಲಿಮೆಂಟಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದೆ’ ಎಂದು ಹೇಳಿದ್ದಾರೆ.

‘ಜೈ ಶಂಕರಂತಹ ಪ್ರತಿಭಾವಂತ ಮಂತ್ರಿ ಭಾರತೀಯರ ರಕ್ಷಣೆಗೆ ಶ್ರಮಿಸುತ್ತಿರುವುದು ಅರ್ಥವಾಯ್ತು. ಆ ಪ್ರದೇಶದ ವಿಮಾನ ನಿಲ್ದಾಣದ ಮೇಲೆ ದಾಳಿಯಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಪ್ರಯತ್ನಗಳಾಗುತ್ತಿವೆ, ಆತಂಕ ಬೇಡ ಎಂದು ಭರವಸೆ ನೀಡಿದ್ದಾರೆ. ಮತ್ತು ಯಾವುದೇ ಹಂತದಲ್ಲೂ ಸಮಸ್ತ ಭಾರತೀಯರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು’ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ಮಾತನಾಡಿದ್ದ ಡಾ. ಎಸ್. ಜೈಶಂಕರ್ ಅವರು, “ಪಶ್ಚಿಮ ಏಷ್ಯಾದ್ಯಂತ ಸಿಲುಕಿರುವ ಭಾರತೀಯರಿಗೆ ಸಹಾಯ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ನಿನ್ನೆಯವರೆಗೆ, ನಮ್ಮ ಸುಮಾರು 67,000 ನಾಗರಿಕರು ಸ್ವದೇಶಕ್ಕೆ ಮರಳಲು ಅಂತಾರಾಷ್ಟ್ರೀಯ ಗಡಿಗಳನ್ನು ದಾಟಿದ್ದಾರೆ” ಎಂದು ವಿವರಣೆ ನೀಡಿದ್ದರು.

ಭಾರತದ ದೃಷ್ಟಿಕೋನ: ಇಂತಹ ಪರಿಸ್ಥಿತಿಯಲ್ಲಿ ಭಾರತದ ದೃಷ್ಟಿಕೋನ ಹೇಗಿರಲಿದೆ? ಎಂದು ಎಸ್. ಜೈಶಂಕರ್ ಮೂರು ಅಂಶಗಳ ಮೂಲಕ ವಿವರಣೆ ನೀಡಿದ್ದಾರೆ.

  1. ಶಾಂತಿ, ಸಂವಾದ ಮತ್ತು ನಾಗರಿಕರ ಸುರಕ್ಷತೆ.
  2. ಆ ಪ್ರದೇಶದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮ.
  3. ಇಂಧನ ಭದ್ರತೆ ಮತ್ತು ವ್ಯಾಪಾರ ಸೇರಿದಂತೆ ಭಾರತದ ರಾಷ್ಟ್ರೀಯ ಹಿತಾಸಕ್ತಿಗಳ ರಕ್ಷಣೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular