HomeKarnatakaBIG NEWS: ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ; ಸಂಸದ ಮುನಿಸ್ವಾಮಿ ಭವಿಷ್ಯ

BIG NEWS: ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ; ಸಂಸದ ಮುನಿಸ್ವಾಮಿ ಭವಿಷ್ಯ

ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕೋಲಾರ ಸಂಸದ ಎಸ್.ಮುನಿಸ್ವಾಮಿ ಕೆಲವೇ ತಿಂಗಳಲ್ಲಿ ಸರ್ಕಾರ ಉರುಳಲಿದೆ ಎಂದು ಹೇಳಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಮುನಿಸ್ವಾಮಿ, ಸಚಿವರು ಶಾಸಕರ ನಡುವೆ ಕಿತ್ತಾಟ ಆರಂಭವಾಗಿದೆ. ಶಾಸಕರಲ್ಲಿಯೇ ಬಣಗಳು ಹುಟ್ಟಿಕೊಂಡಿವೆ. ಮುಂದಿನ ಮೂರು ತಿಂಗಳಲ್ಲಿ ಸರ್ಕಾರ ಉರುಳಲಿದೆ ಎಂದು ಭವಿಷ್ಯ ನುಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಶಾಸಕರು ಹೈಕಮಾಂಡ್ ಗೆ ದೂರು ನೀಡುವ ನಿರ್ಧಾರ ಮಾಡಲಿದ್ದಾರೆ. ಇಲ್ಲವೇ ರಾಜೀನಾಮೆ ನೀಡುವ ಬೆದರಿಕೆ ಹಾಕಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಸಚಿವರುಗಳು 60 ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಯಲ್ಲಿ ನೂರಾರು ಕೋಟಿ ಕಬಳಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular