HomeKarnatakaBIG NEWS: ಸಂಸದ ಮುನಿಸ್ವಾಮಿ ಸೇರಿದಂತೆ 25 ಜನರ ವಿರುದ್ಧ FIR ದಾಖಲು

BIG NEWS: ಸಂಸದ ಮುನಿಸ್ವಾಮಿ ಸೇರಿದಂತೆ 25 ಜನರ ವಿರುದ್ಧ FIR ದಾಖಲು

ಕೋಲಾರ: ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ 25 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಜಮೀನು ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ ಹಾಗೂ ಪ್ರಚೋದನೆ, ವಾಹನಗಳ ಮೇಲೆ ಕಲ್ಲು ತೂರಾಟ, ನಿಂದನೆ ಆರೋಪದ ಮೇಲೆ ಸಂಸದ ಮುನಿಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಹಾಗೂ ರೈತರು ಸೇರಿದಂತೆ 25 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಣ್ಯ ಇಲಾಖೆ ಅಧಿಕಾರಿಗಳು ಶ್ರೀನಿವಾಸಪುರ ಠಾಣೆಯಲ್ಲಿ ದೂರು ನೀಡೊದ್ದು, ಸಂಸದ ಮುನಿಸ್ವಾಮಿ ಎ1 ಆರೋಪಿಯಾಗಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪ, ಅರಣ್ಯ ಸಂರಕ್ಷಣೆ ಕಾಯ್ದೆ, ಕರ್ನಾಟಕ ಅರಣ್ಯ ಕಾಯ್ದೆ 1963 ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಈಗಾಗಲೇ 15 ಜನರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular