HomeKarnatakaBIG NEWS: 2 ಲಕ್ಷ ಲೀಡ್ ನಿಂದ ನಾನು ಮತ್ತೆ ಗೆಲ್ಲುತ್ತೇನೆ; ಸಂಸದ ಪ್ರತಾಪ್ ಸಿಂಹ...

BIG NEWS: 2 ಲಕ್ಷ ಲೀಡ್ ನಿಂದ ನಾನು ಮತ್ತೆ ಗೆಲ್ಲುತ್ತೇನೆ; ಸಂಸದ ಪ್ರತಾಪ್ ಸಿಂಹ ವಿಶ್ವಾಸ

ಮೈಸೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿದ್ದು, ಈ ಬಾರಿ ಚುನಾವಣೆಯಲ್ಲಿ 2 ಲಕ್ಷ ಮತಗಳ ಅಂತರದಿಂದ ಮತ್ತೆ ಗೆಲುವು ಸಾಧಿಸುವುದಾಗಿ ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಎರಡು ಬಾರಿ ಸಂಸದನಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಈಬಾರಿಯೂ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಜನ ನನಗೆ ಮತ ಕೊಡುತ್ತಾರೆ. ನಾನು ಮುಂದಿನ ಚುನಾವಣೆಯಲ್ಲಿ 2 ಲಕ್ಷ ಮತಗಳ ಲೀಡ್ ನಿಂದ ಗೆದ್ದೇ ಗೆಲ್ಲುತ್ತೇನೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಪಕ್ಷದ ವರಿಷ್ಠರ ನಿರ್ಧಾರವೇ ಅಂತಿಮ. ಅವರ ತೀರ್ಮಾನಕ್ಕೆ ನಾವು ಬದ್ಧರು ಎಂದು ಹೇಳಿದರು.

ಏಕಾಂಗಿಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿದ ಯಡಿಯುರಪ್ಪನವರು ನಮ್ಮ ನಾಯಕರು. ಅವರು ಏನೇ ತೀರ್ಮಾನ ಮಾಡಿದರೂ ಪಕ್ಷದ ಒಳಿತಾಗಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular