BIG NEWS: ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ

ಮೈಸೂರು: ರಾಜಕಾರಣಿಗಳು ಜೋತಿಷ್ಯ, ಸಂಖ್ಯಾಶಾಸ್ತ್ರಗಳನ್ನು ನಂಬುವುದು ಹೆಚ್ಚು. ಈಗಾಗಲೇ ಹಲವು ರಾಜಕೀಯ ನಾಯಕರು ಸಂಖ್ಯಾಶಾಸ್ತ್ರದ ಪ್ರಕಾರ ತಮ್ಮ ಹೆಸರು ಬದಲಿಸಿಕೊಂಡಿದ್ದಾರೆ. ಅಂತೆಯೇ ಇದೀಗ ಸಂಸದ ಪ್ರತಾಪ್ ಸಿಂಹ ತಮ್ಮ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದ ಸಂಸದರಾಗಿರುವ ಪ್ರತಾಪ್ ಸಿಂಹ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈಗ ಸಂಖ್ಯಾಶಾಸ್ತ್ರದ ಪ್ರಕಾರ ತಮ್ಮ ಇಂಗ್ಲೀಷ್ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

Prathap simha ಎಂಬ ಹೆಸರನ್ನು ಸಂಖ್ಯಾಶಾಸ್ತ್ರದ ಪ್ರಕಾರ ಈಗ Pratap simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡವಿಟ್ ಮೂಲಕ ಘೋಷಿಸಿದ್ದಾರೆ.

ಕೆಲ ರಾಜಕಾರಣಿಗಳು ಜೋತಿಷ್ಯ, ಸಂಖ್ಯಾಶಾಸ್ತ್ರಗಳ ಪ್ರಕಾರ ತಮ್ಮ ಹೆಸರಿನಲ್ಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಅದೃಷ್ಟ ಪರೀಕ್ಷೆ ಮಾಡುತ್ತಾರೆ. ಅದೇ ರೀತಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yedyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಿಸಿಕೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read