HomeKarnatakaBIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಂಸದ

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಂಸದ

ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರದ್ದು ಮೂಡಾ ಹಗರಣವೊಂದೇ ಅಲ್ಲ. ಇನ್ನೂ ಬಹಳ ಕೇಸ್ ಗಳಿವೆ ಎಂದು ಸಂಸದ ರಮೇಶ್ ಜಿಗಜಿಣಗಿ ಹೊಸ ಬಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಸಂಸದ ರಮೇಶ್ ಜಿಗಜಿಣಗಿ, ಸಿದ್ದರಾಮಯ್ಯ ಅವರದ್ದು ಬಹಳ ಕೇಸ್ ಗಳಿವೆ. ಆದರೆ ಯಾವ ಕೇಸ್ ಗಳು ಎಂದು ಗೊತ್ತಿಲ್ಲ. ಅವರಿವರು ಕರೆ ಮಾಡಿ ಹೇಳುತ್ತಿದ್ದಾರೆ. ಇನ್ನಷ್ಟು ಕೇಸ್ ಗಳಾಗುವುದಂತೂ ಗ್ಯಾರಂಟಿ. ಆದರೆ ಇವುಗಳಲ್ಲಿ ಬಿಜೆಪಿ ನಾಯಕರ ಪಾತ್ರವಿಲ್ಲ ಎಂದರು.

ಕಾಂಗ್ರೆಸ್ ಪಕ್ಷದವರದ್ದೇ ಪ್ಲಾನ್ ಇದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಹಲವು ಮಾಹಿತಿಗಳನ್ನು ನಮಗೆ ಕಾಂಗ್ರೆಸ್ ನವರೇ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು ನಿಜ. ಅದಕ್ಕೆ ಅವರು ರಾಜೀನಾಮೆ ಕೊಡಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಸಿದ್ದರಾಮಯ್ಯ ಒಳ್ಳೆಯ ಮನುಷ್ಯ. ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮುಡಾ ವಿಚಾರವಾಗಿ ಆರೋಪ ಕೇಳಿಬಂದರೂ ಅಧಿಕಾರಕ್ಕೆ ಬೆನ್ನುಹತ್ತಿದ್ದಾರೆ ಎಂದು ಆರೋಪಿಸಿದರು.

 

 

For Latest News Updates, Join Our Whatsapp Community🚩
RELATED ARTICLES

Most Popular