ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಮನವಿ ಮಾಡ್ತೇವೆ: ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ದರೆ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗಲಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ ಮಾತನಾಡಿದ ಅವರು, ಸರ್ಕಾರ ಬಂದ ಒಂದು ಗಂಟೆಯೊಳಗೆ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ, ಇದುವರೆಗೂ ಗ್ಯಾರಂಟಿ ಯೋಜನೆಗಳು ಕಾರ್ಯಗತವಾಗಿಲ್ಲ ಎಂದು ಟೀಕಿಸಿದ್ದಾರೆ.

ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಸ್ವಲ್ಪ ದಿನ ಕಾದು ನೋಡುತ್ತೇವೆ. ಯಾರೂ ಕರೆಂಟ್ ಬಿಲ್ ಕಟ್ಟಬಾರದು ಎಂದು ಮನವಿ ಮಾಡುತ್ತೇವೆ. ಕಾಂಗ್ರೆಸ್ ನೀಡಿದ ಭರವಸೆಯಂತೆ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಭರವಸೆ ಈಡೇರಿಸದಿದ್ದರೆ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read