HomeKarnatakaಆದಾಯ ಮೀರಿ ಆಸ್ತಿ ಗಳಿಕೆ; ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಬಿಗ್ ಶಾಕ್: ಪ್ರಕರಣ ರದ್ದು ಕೋರಿದ...

ಆದಾಯ ಮೀರಿ ಆಸ್ತಿ ಗಳಿಕೆ; ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಬಿಗ್ ಶಾಕ್: ಪ್ರಕರಣ ರದ್ದು ಕೋರಿದ ಅರ್ಜಿ ವಜಾ

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ

2015ರಲ್ಲಿ ಗುರುಪಾದಯ್ಯ ಮಠದ್ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಎಫ್ಐಆರ್ ದಾಖಲಿಸಿದ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ತನಿಖೆ ಮುಕ್ತಾಯವಾಗಿ ಅಂತಿಮ ವರದಿ ಸಿದ್ಧವಾಗಿದೆ. ಸಕ್ಷಮ ಪ್ರಾಧಿಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಲೋಕಾಯುಕ್ತ ಪರ ವಕೀಲ ಬಿ.ಎಸ್. ಪ್ರಸಾದ್ ವಾದ ಮಂಡಿಸಿದ್ದಾರೆ. ನ್ಯಾ. ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಪ್ರಕರಣ ರದ್ದು ಕೋರಿದ ಎಂ.ಪಿ. ರೇಣುಕಾಚಾರ್ಯ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular