ಬಿಜೆಪಿಯ ಮತ್ತೊಂದು ಬಿಗ್ ವಿಕೆಟ್ ಪತನ…?: ಸಿಎಂ, ಡಿಸಿಎಂ ಬಳಿಕ ಸಚಿವ ಮಲ್ಲಿಕಾರ್ಜುನ್ ಭೇಟಿಯಾದ ರೇಣುಕಾಚಾರ್ಯ

ಬೆಂಗಳೂರು: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ರಾಜಧಾನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದ ರೇಣುಕಾಚಾರ್ಯ ಇಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಆಪರೇಷನ್ ಹಸ್ತ ಆರಂಭಿಸಿದ್ದು, ವಿಪಕ್ಷಗಳ ಹಲವು ಪ್ರಮುಖರನ್ನು ಸೆಳೆಯುತ್ತಿದೆ. ಈಗಾಗಲೇ ಅನೇಕರು ಕಾಂಗ್ರೆಸ್ ಸೇರಿದ್ದುಮ ಇದರ ಮುಂದುವರೆದ ಭಾಗವಾಗಿ ಎಂ.ಪಿ. ರೇಣುಕಾಚಾರ್ಯ ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ರೇಣುಕಾಚಾರ್ಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದು, ಬಿಜೆಪಿಯಿಂದ ಟಿಕೆಟ್ ಬಯಸಿದ್ದಾರೆ. ಆದರೆ ಹಾಲಿ ಸಂಸದರಾಗಿರುವ ಜಿ.ಎಂ. ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡುವುದು ಖಚಿತ ಎನ್ನಲಾಗಿದ್ದು, ರೇಣುಕಾಚಾರ್ಯ ಕಾಂಗ್ರೆಸ್ ನಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಇದರ ಭಾಗವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಮಾತ್ರವಲ್ಲದೇ, ಸಾರ್ವಜನಿಕ ವಲಯದಲ್ಲಿಯೂ ಭಾರಿ ಚರ್ಚೆಗೆ ಕಾರಣವಾಗಿದೆ. ರೇಣುಕಾಚಾರ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

ಆದರೆ, ಇದನ್ನು ಅಲ್ಲಗಳೆದ ರೇಣುಕಾಚಾರ್ಯ ಅವರು, ಹೊನ್ನಾಳಿ, ನ್ಯಾಮತಿ ತಾಲೂಕುಗಳನ್ನು ಬರಪೀಡಿತ ತಾಲೂಕಗಳ ಪಟ್ಟಿಗೆ ಸೇರ್ಪಡೆಗೆ ಶಿಫಾರಸು ಮಾಡಲು ಮತ್ತು ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಲು ಸಚಿವ ಮಲ್ಲಿಕಾರ್ಜುನ್ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read