HomeKarnatakaBIG BREAKING: ಸೋಲಿನ ಆಘಾತದ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ

BIG BREAKING: ಸೋಲಿನ ಆಘಾತದ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ ರೇಣುಕಾಚಾರ್ಯ ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷದಿಂದ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಜನ ಸೋಲಿಸಿದ್ದಾರೆ ಎಂದು ಬೆಂಬಲಿಗರ ಬಳಿ ರೇಣುಕಾಚಾರ್ಯ ನೋವು ತೋಡಿಕೊಂಡಿದ್ದಾರೆ. ಇದಕ್ಕೆ ಒಪ್ಪದ ಬೆಂಬಲಿಗರು ಅಂಥ ಮಾತು ಹೇಳಬೇಡಿ ಎಂದಿದ್ದಾರೆ.

https://fb.watch/kvYS5_1DHu/

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular