HomeKarnatakaಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸಾವು

ಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸಾವು

ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಝಾನ್ಸಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಕ್ಕಿ ಫ್ಯಾಕ್ಟರಿ ಬಳಿಯ ಶಿವಪುರಿ ಲಿಂಕ್ ರಸ್ತೆಯಲ್ಲಿ ಮುಂಜಾನೆ 3 ರಿಂದ 4 ಗಂಟೆಯ ನಡುವೆ ಅಪಘಾತ ಸಂಭವಿಸಿದೆ. ಘಟನೆಯ ವೇಳೆ ಕಾರಿನಲ್ಲಿ ಐವರು ಇದ್ದರು.

ಪೊಲೀಸರ ಪ್ರಕಾರ, ಐವರು ಸ್ನೇಹಿತರಾಗಿದ್ದು, ತಡರಾತ್ರಿ ಸಂತೌ ಗ್ರಾಮದ ಶಿಟ್ಲಾ ಮಾತಾ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳಿದ್ದರು. ಪೂಜೆ ಮುಗಿಸಿ ತಮ್ಮ ಮನೆಗಳಿಗೆ ಹಿಂತಿರುಗುತ್ತಿದ್ದ ವೇಳೆ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ಸಂಜಯ್ ಧಕಡ್(24), ವಿವೇಕ್ ಜೋಶಿ (22), ಮತ್ತು ಹೃತಿಕ್ ಮಾಂಝಿ (22) ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಅಂಕಿತ್ ಶರ್ಮಾ ಮತ್ತು ಮೊಹಿಲ್ ರೈ ಎಂದು ಗುರುತಿಸಲಾಗಿದೆ.

ಗ್ವಾಲಿಯರ್‌ನ ಹೆಚ್ಚುವರಿ ಪೊಲೀಸ್ ಅಧೀಕ್ಷಕ(ಎಎಸ್‌ಪಿ) ನಿರಂಜನ್ ಶರ್ಮಾ ಮಾಹಿತಿ ನೀಡಿದ್ದು, ಮೇಲ್ನೋಟಕ್ಕೆ ಕಾರು ಅತಿವೇಗದಲ್ಲಿ ಓಡಿದ ಕಾರಣ ಅಪಘಾತದಲ್ಲಿ ಛಿದ್ರವಾಗಿದೆ. ಕಾರ್ ಇಂಜಿನ್ ನೆಲದ ಮೇಲೆ ಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular