ನಾಳೆ ಸಂಜೆ 4 ಕ್ಕೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ : ಮಹತ್ವದ ನಿರ್ಣಯಗಳಿಗೆ ಅನುಮೋದನೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ( cabinet Meeting ) ನವೆಂಬರ್ 9 ರಂದು ನಾಳೆ ನಡೆಯಲಿದ್ದು, ಸಭೆ ಬಹಳ ಮಹತ್ದದ್ದಾಗಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನೀರಿನ ಸಮಸ್ಯೆ, ಕಾವೇರಿ ವಿವಾದ, ನಿಗಮ ಮಂಡಳಿ ನೇಮಕಾತಿ, ಲೋಕಸಭೆ ಚುನಾವಣೆ, ಆಪರೇಷನ್ ಹಸ್ತ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆಯೂ ಚರ್ಚೆ ನಡೆಯಲಿದ್ದು, ಬರ ಪೀಡಿತ ಪಟ್ಟಿಗೆ ಇನ್ನಷ್ಟು ತಾಲೂಕುಗಳನ್ನು ಘೋಷಣೆ ಕೂಡ ಮಾಡುವಂತೆ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read