BIG NEWS: ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ; ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ; ಸಿಎಂ ವಾಗ್ದಾಳಿ

ಮೈಸೂರು: ಸಂಸತ್ ಅಧಿವೇಶನದಿಂದ ವಿಪಕ್ಷ ಸಂಸದರನ್ನು ಅಮಾನತು ಮಾಡಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷದವರ ವಾದವನ್ನು ಕೇಳಬೇಕು. ಆದರೆ ಇಲ್ಲಿ ಅವರ ಹಕ್ಕುಗಳನ್ನು ಕಸಿದುಕೊಳ್ಳುವ ಯತ್ನ ನಡೆದಿದೆ ಎಂದು ಕಿಡಿಕಾರಿದರು.

ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಈಗ ಇಂತಹ ಘಟನೆ ನಡೆದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read